Friday, March 14, 2025

Latest Posts

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಆದಿವಾಸಿ, ದಲಿತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ

- Advertisement -

www.karnatakatv.net : ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದಿವಾಸಿಗಳ ಹಾಗೂ ದಲಿತರನ್ನು ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಇನ್ನಾದರೂ ಪ್ರಧಾನಮಂತ್ರಿಗಳು ಈ ಹಿಂದೆ ಹೇಳಿದಂತೆ ದಲಿತ ಹಾಗೂ ಆದಿವಾಸಿ ಮಹಿಳೆಯರ ಮಾನ ಕಾಪಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿಯ ಅಧ್ಯಕ್ಷರಾದ ಎಫ್. ಎಚ್.ಜಕ್ಕಪ್ಪನವರ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತು ಹಲವಾರು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಮತ್ತು ಆದಿವಾಸಿಗಳ ಮೇಲೆ ದೌರ್ಜನ್ಯ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ಹೆಚ್ಚಾಗುತ್ತಿವೆ ಎಂದರು.

ರಾಷ್ಟ್ರದಲ್ಲಿ‌ ಇಂತಹ ಪ್ರಕರಣಗಳು 45000 ಜರುಗಿದ್ದರೇ ಉತ್ತರ ಪ್ರದೇಶ ಒಂದೇ ರಾಜ್ಯದಲ್ಲಿ ಹತ್ತೂ ಸಾವಿರಕ್ಕೂ ಹೆಚ್ಚು ಜರುಗಿರುವುದು ನಿಜಕ್ಕೂ ಚಿಂತಾಜನಕ ಸಂಗತಿಯಾಗಿದೆ. ಅಲ್ಲದೆ ಪೊಲೀಸ್ ಇಲಾಖೆ ಕೂಡ ಅಪರಾಧಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

- Advertisement -

Latest Posts

Don't Miss