www.karnatakatv.net : ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಅನ್ನು ಕೂಡ ಸೇರ್ಪಡೆಗೊಳಿಸಲು ಐಸಿಸಿ ಸಿದ್ಧತೆಯನ್ನು ಆರಂಭಿಸಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ.
1900ರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಕ್ರಿಕೆಟ್ ಆಡಲಾಗಿತ್ತು. ಈ ವೇಳೆ ಗ್ರೇಟ್ ಬ್ರಿಟನ್ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು. ಆ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಿಂದ ಕ್ರಿಕೆಟ್ ಅನ್ನು ಹೊರಗಿಡಲಾಯಿತು. ಇದೀಗ ಮತ್ತೊಮ್ಮೆ ಕ್ರೀಡಾ ಮಹಾ ಸಮರವಾದ ಒಲಿಂಪಿಕ್ಸ್ನಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲು ಬೇಕಾದ ತಯಾರಿಗಳನ್ನು ಮಾಡುತ್ತಿರುವುದಾಗಿ ಐಸಿಸಿ ತಿಳಿಸಿದೆ.
ಇದಕ್ಕಾಗಿ ವಿಶೇಷ ಸಮಿತಿಯನ್ನು ರಚಿಸಿದ್ದು, ಈ ತಂಡವು 2028 ಲಾಸ್ ಏಂಜಲೀಸ್ ಒಲಿಂಪಿಕ್ಸ್, 2032ರ ಬ್ರಿಸ್ಬೇನ್ ಒಲಿಂಪಿಕ್ಸ್ ಮತ್ತು ಅದರಾಚೆಗಿನ ಕ್ರೀಡಾಕೂಟದಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲು ಬೇಕಾದ ಸಿದ್ಧತೆಗಳನ್ನು ಆರಂಭಿಸಿದೆ. ಇನ್ನು ಐಸಿಸಿಯ ಈ ನಡೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೂಡ ಬೆಂಬಲಿಸಿದ್ದು, ಒಲಿಂಪಿಕ್ಸ್ನಲ್ಲಿ ಟೀಮ್ ಇಂಡಿಯಾ ಪಾಲ್ಗೊಳಲಿದೆ ಎಂದು ತಿಳಿಸಿದೆ.
ವಿನುತಾ ಹವಾಲ್ದಾರ್ ಕರ್ನಾಟಕ ಟಿವಿ ಬೆಂಗಳೂರು




