Saturday, July 12, 2025

Latest Posts

ಎಸಿಬಿ ಬಲೆಗೆ ಬಿದ್ದ ಎಫ್ಡಿಎ ಅಧಿಕಾರಿ

- Advertisement -

www.karnatakatv.net : ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್‌ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಹೌದು. ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ಖಜಾನೆ ಇಲಾಖೆಯಲ್ಲಿ, ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಲಾಷ ಆಲೂರ, ಎಂಬುವರು ನಿವೃತ್ತ ಪೊಲೀಸ್  ಸಬ್ ಇನ್ಸ್ಪೆಕ್ಟರ್ ಕಡೆಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಾಗ, ಮುಂಗಡ ಹಣವಾಗಿ ಮೂರು ಸಾವಿರ ರೂಪಾಯಿಯನ್ನು ಪಡೆದುಕೊಳ್ಳುವ ಸಮಯದಲ್ಲಿ ಎಸಿಬಿ ಬಲೆಗೆ ಬಿದ್ದಿದ್ದಾನೆ. ಧಾರವಾಡ ಜಿಲ್ಲಾ ಎಸಿಬಿ ಡಿವೈಎಸ್ಪಿ ವೇಣುಗೋಪಾಲ ನೇತೃತ್ವದಲ್ಲಿ ದಾಳಿ ನಡೆದಿದ್ದು, ನಗರ ಜಿಲ್ಲಾ ಖಜಾನೆ ಕಚೇರಿಯಲ್ಲಿ ವಿಚಾರಣೆ ನಡೆಯುತ್ತಿದೆ.

ಕರ್ನಾಟಕ ಟಿವಿ ಹುಬ್ಬಳ್ಳಿ

- Advertisement -

Latest Posts

Don't Miss