www.karnatakatv.net : ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ಮಾಡಿ ಕ್ಷಮೆ ಕೇಳಿರುವದಾಗಿ ಸ್ಪಷ್ಟನೆ ನೀಡಿದ್ದಾರೆ.
ನನ್ನನ್ನು ಜೋಕರ್ ಎಂದು ಬಿ ಕೆ ಹರಿಪ್ರಸಾದ್ ಅವರು ಕರೆದಿದ್ದಕ್ಕೆ, ನರೇಂದ್ರ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಬಳಸಬೇಕು ಎಂದಿದ್ದಕ್ಕೆ ಸಿಟ್ಟಿನ ಭರದಲ್ಲಿ ನಾನು ಆ ಪದ ಬಳಕೆ ಮಾಡಿದ್ದೆ. ಕೂಡಲೇ ನನ್ನ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದೆನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಮೇಲೆ ಯಾವುದೇ ಕೇಸುಗಳಿಲ್ಲ, ತುರ್ತು ಪರಿಸ್ಥಿತಿ ಸಂದರ್ಭ ಬಿಟ್ಟರೆ ಬೇರೆ ಯಾವ ಸಂದರ್ಭದಲ್ಲಿಯೂ ನಾನು ಜೈಲಿಗೆ ಹೋಗಿ ಬಂದಿಲ್ಲ, ನರೇಂದ್ರ ಮೋದಿ ಹೆಸರು ಸುಲಭ ಶೌಚಾಲಯಕ್ಕೆ ಹೆಸರಿಡಿ ಅಂತಾ ಹೇಳಿದ್ದು ಸರೀನಾ? ಜೋಕರ್ ಅಂದಿದ್ದಕ್ಕೆ ಸಿಟ್ಟು ಬಂತು. ಸಿಟ್ಟಿನ ಭರದಲ್ಲಿ ಆ ಮಾತು ಮಾತನಾಡಿ ತಕ್ಷಣವೇ ಕ್ಷಮೆಯನ್ನು ಕೇಳಿದ್ದೆನೆ ಎಂದು ಹೇಳಿದರು.
ವಿನುತಾ ಹವಾಲ್ದಾರ್ ಕರ್ನಾಟಕ ಟಿವಿ ಬೆಂಗಳೂರು




