www.karnatakatv.net : ಗುಂಡ್ಲುಪೇಟೆ : 2020 – 21 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತಾಲ್ಲೂಕಿನ ಸುಮಾರು 22 ಮಂದಿ ವಿಕಲಚೇತನ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಾರ್ಗದರ್ಶಿ ಸ್ವಯಂ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಭಿನಂದನೆಗೆ ಭಾಜನರಾದ ವಿದ್ಯಾರ್ಥಿಗಳನ್ನು ಕ್ಷೇತ್ರದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸನ್ಮಾನಿಸಿದರು..
ವಿದ್ಯಾರ್ಥಿಗಳ ಕುರಿತು ಮಾತನಾಡಿದ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉತ್ತೀರ್ಣರಾಗಿರುವುದು ಸಂತಸದ ವಿಷಯ ಹಾಗೆ ನಿಮ್ಮ ಮುಂದಿನ ವಿದ್ಯಾಭ್ಯಾಸ ಉತ್ತಮವಾಗಿರಲಿ ಎಂದು ಆಶಿಸಿದರು.. ಈ ಸಂಧರ್ಭದಲ್ಲಿ ಪುರಸಭಾ ಅಧ್ಯಕ್ಷ ಪಿ.ಗಿರೀಶ್, ಶಿಕ್ಷಣಾಧಿಕಾರಿ ಶಿವಮೂರ್ತಿ, ಇತರರು ಹಾಜರಿದ್ದರು..
ಕರ್ನಾಟಕ ಟಿವಿ ಗುಂಡ್ಲುಪೇಟೆ