Thursday, December 12, 2024

Latest Posts

ಕಂದಹಾರ್ ಮತ್ತು ಲಷ್ಕರ್ ತಾಲಿಬಾನ್ ವಶಕ್ಕೆ

- Advertisement -

www.karnatakatv.net : ನಗರದ ‘ಹುತಾತ್ಮರ ಚೌಕ ತಲುಪಿದೆ’ ಎಂದು ತಾಲಿಬಾನ್ ವಕ್ತಾರರು ಘೋಷಿಸಿದ್ದಾರೆ. ಅಫ್ಘಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್​ ಅನ್ನು ಕೂಡ ತಾಲಿಬಾನ್ ಪಡೆಗಳು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

‘ಕಂದಹಾರ್‌ ಅನ್ನು ಸಂಪೂರ್ಣವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ.  ಅಫ್ಘಾನಿಸ್ತಾನದ 34 ಪ್ರಾಂತೀಯ ರಾಜಧಾನಿಗಳಲ್ಲಿ ಕಂದಹಾರ್ 12ನೇ ಪ್ರಾಂತೀಯ ರಾಜಧಾನಿಯಾಗಿದೆ. ಕಂದಹಾರ್’ನ್ನೂ ಕೂಡ ತಾಲಿಬಾನ್ ವಶಕ್ಕೆ ಪಡೆದುಕೊಂಡಿದ್ದು, ಈ ಮೂಲಕ ತಾಲಿಬಾನಿಗಳು ಅಫ್ಘಾನಿಸ್ತಾನದ ಬಹುಭಾಗವನ್ನು ಈಗಾಗಲೇ ಆವರಿಸಿದ್ದಾರೆಂದು ಹೇಳಲಾಗುತ್ತಿದೆ.

ರಾಜಧಾನಿ ಮತ್ತು ಇತರ ಕೆಲವೇ ಭೂಭಾಗಗಳು ಸರ್ಕಾರದ ನಿಯಂತ್ರಣದಲ್ಲಿದ್ದು, ಉಳಿದಂತೆ ಹೆಚ್ಚಿನ ಭೂಭಾಗ ತಾಲಿಬಾನ್ ಉಗ್ರರ ವಶವಾಗಿವೆ. ಈ ಬೆನ್ನಲ್ಲೇ ಅಲ್ಲಿನ ಸರ್ಕಾರವ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಾಕಷ್ಟು ಹೆಣಗಾಡುತ್ತಿದೆ.

- Advertisement -

Latest Posts

Don't Miss