- Advertisement -
www.karnatakatv.net : ಶಾಲಾ ಆರಂಭದ ನಿರೀಕ್ಷೆಯಲ್ಲಿದ್ದ ಪೋಷಕರು ಈಗ ಮಕ್ಕಳಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚುತ್ತಿರುವದರಿಂದ ಆತಂಕಕ್ಕೆ ಒಳಗಾಗಿದ್ದಾರೆ. ಆಗಸ್ಟ್ ಮೊದಲ ಎರಡು ವಾರಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಆಗಸ್ಟ್ 23 ರಿಂದ 9-12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇಂತಹ ಗಳಿಗೆಯಲ್ಲಿ ಮಕ್ಕಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ಬಿಬಿಎಂಪಿ ಮಾಹಿತಿ ಪ್ರಕಾರ 1-9 ವರ್ಷ ವಯೋಮಾನದ ಸುಮಾರು 88 ಮಕ್ಕಳು, 10-19 ವರ್ಷ ವಯಸ್ಸಿನ 305 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
- Advertisement -