Friday, July 4, 2025

Latest Posts

ಚುರುಕುಗೊಂಡ ಪಾಲಿಕೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ…!

- Advertisement -

www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಲು ಪಾಲಿಕೆ ಆವರಣದತ್ತ ದೌಡಾಯಿಸುತ್ತಿದ್ದಾರೆ.

ಹೌದು.. ಕಳೆದ ಎರಡು ದಿನಗಳಿಂದ ಆಮೆ ವೇಗದಲ್ಲಿದ್ದ ನಾಮಪತ್ರ ಸಲ್ಲಿಕೆ ಚುರುಕುಗೊಂಡಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ವಲಯದಲ್ಲಿ ಅಭ್ಯರ್ಥಿಗಳ ಪಟ್ಟಿ ವಿಳಂಬವಾಗಿದ್ದು, ಆಮ್ ಆದ್ಮಿ ಹಾಗೂ ಶಿವಸೇನಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಪಾಲಿಕೆ ಆವರಣದತ್ತ ಆಗಮಿಸುತ್ತಿದ್ದಾರೆ.

ಅಲ್ಲದೇ ಪಾಲಿಕೆ ಆವರಣದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ನಿಯೋಜನೆ ಮಾಡಲಾಗಿದೆ.

ಕರ್ನಾಟಕ ಟಿವಿ ಹುಬ್ಬಳ್ಳಿ

- Advertisement -

Latest Posts

Don't Miss