www.karnatakatv.net : ಹುಬ್ಬಳ್ಳಿ: ಜಾತ್ಯಾತೀತ ಜನತಾದಳದಲ್ಲಿ ಕಾರ್ಯಕರ್ತರು ಸರಿಯಿಲ್ಲ ಅಂತ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ. ಕಾರ್ಯಕರ್ತರಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ನಾನು ಬೆಂಗಳೂರಿಗೆ ಹೋಗುತ್ತಿದ್ದಂತೆ , ಮನೆಗೆ ಹೋಗಿ ಮಲಗುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕಾರ್ಯಕರ್ತರು ಸರಿಯಿಲ್ಲ ಹೀಗಾಗಿ ನಮ್ಮ ಪಕ್ಷ. ಉತ್ತರ ಕರ್ನಾಟಕದಲ್ಲಿ ಸಂಘಟನೆ ಆಗುತ್ತಿಲ್ಲ. ಯಾರು ಪಕ್ಷದ ಬಗ್ಗೆ ಸೀರಿಯಸ್ ಆಗಿ ಕೆಲಸ ಮಾಡ್ತಾರೆ ಅವರಿಗೆ ಮಣೆ ಹಾಕುತ್ತೇವೆ ಎಂದರು. ಜನತಾ ಪರಿವಾರದ ಹಳಬರನ್ನು ಒಟ್ಟುಗೂಡಿಸುವ ಆಸಕ್ತಿ ಇಲ್ಲ. ಹೊಸಬರಿಂದಲೇ ಪಕ್ಷ ಕಟ್ಟುತ್ತೇನೆ. ಪಕ್ಷ ಬಲವರ್ಧನೆ ವಿಚಾರದಲ್ಲಿ ನನಗೆ ಮಮತಾ ಬ್ಯಾನರ್ಜಿಯವರೇ ಸ್ಪೂರ್ತಿ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದ್ರು.
ಕರ್ನಾಟಕ ಟಿವಿ ಹುಬ್ಬಳ್ಳಿ