ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧಕ್ಕೆ ಸಿಎಂ ಪ್ಲಾನ್

www.karnatakatv.net : ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ  ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ   ಕೇಂದ್ರ ಸರ್ಕಾರದ ಸಹಯೋಗದಲ್ಲಿ  ಕಡಿಮೆ  ದರದಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸೊ ಸಲುವಾಗಿ ಪ್ರತ್ಯೇಕ  ಸೊಸೈಟಿ ಸ್ಥಾಪನೆಗೆ  ಸರ್ಕಾರ ಚಿಂತನೆ ನಡೆಸಿದೆ.

ಸಿ.ಎಸ್.ಆರ್  ಹಾಗೂ ಸರ್ಕಾರದ ನಿಧಿ ಬಳಸಿ ಸೊಸೈಟಿಯ ಮೂಲಕ ರೋಗಿಗಳ ಕುಟುಂಬದವರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಅಂತ ಸಿಎಂ ತಿಳಿಸಿದ್ದಾರೆ.

ಕಲಬುರಗಿ, ಶಿವಮೊಗ್ಗ, ಮೈಸೂರಿನಲ್ಲಿ ಈಗಾಗಲೇ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಿದ್ದು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ  ಕ್ಯಾನ್ಸರ್ ಆಸ್ಪತ್ರೆ ತೆರೆಯಲು  ಹಾಗೂ   ಪ್ರಾದೇಶಿಕವಾರು ಕ್ಯಾನ್ಸರ್ ಆಸ್ಪತ್ರೆಗಳನ್ನು ಶೀಘ್ರವೆ ನಿರ್ಮಿಸಲಾಗುವುದು ಅಂತ ಇದೇ ವೇಳೆ ಸಿಎಂ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಟಿವಿ – ಬೆಂಗಳೂರು

About The Author