Thursday, December 12, 2024

Latest Posts

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಮಾನತು

- Advertisement -

www.karnatakatv.net : ರಾಯಚೂರು : ಕರ್ತವ್ಯಲೋಪವೆಸಗಿದ ಹಿನ್ನೆಲೆಯಲ್ಲಿ ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ರಾಯಚೂರಿನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ಅವರನ್ನು ಸೇವೆಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಮಕೃಷ್ಣ ವಿರುದ್ಧ ಪದೇ ಪದೆ ಅನೇಕ ದೂರುಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಸದ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿಯಾಗಿರುವ ಡಾ.ಕೆ ನಾಗರಾಜ್ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೂ ರಾಮಕೃಷ್ಣರವರ ಜವಾಬ್ದಾರಿಯನ್ನು ನಿಭಾಯಿಸುವಂತೆ ಇಲಾಖೆ ಆಯುಕ್ತರು ಆದೇಶ ನೀಡಿದ್ದಾರೆ.

ಅನೀಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು

- Advertisement -

Latest Posts

Don't Miss