www.karnatakatv.net :ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯಲಿವೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಾತಿಗಾಗಿ ನಡೆಯುವ ಕಾಮನ್ ಎಂಟ್ರೆನ್ಸ್ ಟೆಸ್ಟ್ ಆ.28ರಿಂದ ಆ.30ರವರೆಗೆ ನಡೆಯಲಿವೆ.
ರಾಜ್ಯಾದ್ಯಂತ ಈ ಬಾರಿ ಒಟ್ಟು 201816 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇನ್ನು ನಾಳೆ ಜೀವವಿಜ್ಞಾನ ಮತ್ತು ಗಣಿತ, ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಸಾಯನಿಕಶಾಸ್ತ್ರ ವಿಷಯಗಳ ಕುರಿತಾಗಿ ಪರೀಕ್ಷೆ ನಡೆಯಲಿವೆ. ಇನ್ನು ಆ.೩೦ರಂದು ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸಿಇಟಿ ಪರೀಕ್ಷೆಗಳು ನಡೆಯಲಿವೆ.
ಬೆಂಗಳೂರಿನಲ್ಲಿ 86 ಕೇಂದ್ರಗಳು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 530 ಕೇಂದ್ರಗಳಲ್ಲಿ ಪರೀಕ್ಷೆಗಳ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸಮಸ್ಯೆ ಇಲ್ಲದೆ ಸುಗಮವಾಗಿ ಪರೀಕ್ಷೆಯನ್ನು ನಡೆಸಲು ಎಲ್ಲಾ ರೀತಿಯ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ.
ಕರ್ನಾಟಕ ಟಿವಿ- ಬೆಂಗಳೂರು