www.karnatakatv.net :ಸೆಪ್ಟೆಂಬರ್ ತಿಂಗಳಿನಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಮಳೆ ಮಳೆಯಾಗಿದ್ದು, ಎರಡು ತಿಂಗಳಿನಲ್ಲಿ ಬಿಟ್ಟು ಬಿಟ್ಟು ಮಳೆಯಾಗಿತ್ತು. ದೀರ್ಘಕಾಲ ಬಿಡುವನ್ನೂ ಪಡೆದುಕೊಂಡಿತ್ತು. ಹೀಗಾಗಿ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿತ್ತು. ಇದೀಗ ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ರೈತರಲ್ಲಿ ಸಂತಸ ಮೂಡಿಸಿದೆ.




