- Advertisement -
www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು.
ಇದೇ ವೇಳೆ ಸಾವಿಗೆ ಕಾರಣರಾದ ಅಧಿಕಾರಿಗಳನ್ನು ಬಂಧಿಸುವಂತೆ ಒತ್ತಾಯಿಸಿ, ರಾಯಚೂರು ನಗರದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ಪ್ರಾರಂಭಿಸಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ರು.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು
- Advertisement -