www.karnatakatv.net :ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರೋ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದೆ. ದೇಶದ ಬಹುತೇಕ ಕಡೆ ಇನ್ನೂ 4 ದಿನಗಳ ಕಾಲ ಮಳೆ ಸುರಿಯೋ ಸಾಧ್ಯತೆ ಇದೆ ಅಂತ ತಿಳಿಸಿದೆ.
ಕಳೆದೆರಡು ದಿನಗಳಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇವತ್ತು ಮಳೆಯಾಗುವ ಸಾಧ್ಯತೆ ಅಂತ ಮಾಹಿತಿ ನೀಡಿರುವ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇದೂ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಉತ್ತಮ ಮಳೆಯಾಗಲಿದೆ.
ಇನ್ನು ಬೆಂಗಳೂರು ನಗರದಲ್ಲಿ ಇಂದು ಸಹ ಮೋಡ ಕವಿದ ವಾತಾವರಣವಿದೆ. ಮುಂದಿನ 24 ಗಂಟೆಗಳಲ್ಲಿ, ಕರ್ನಾಟಕದ ಕರಾವಳಿ , ಮಲೆನಾಡು,ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ದಕ್ಷಿಣ ಮಧ್ಯಪ್ರದೇಶ ಸಿಕ್ಕಿಂ, ಅಸ್ಸಾಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯಲಿದೆ.
ಕರ್ನಾಟಕ ಟಿವಿ –ಬೆಂಗಳೂರು