www.karnatakatv.net :ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರಂದು ಆರಂಭವಾಗಲಿದೆ. ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ.
ಭಾರತದಲ್ಲಿ ನಡೆಯಬೇಕಿದ್ದ ಟೂರ್ನಿ, ಕೊರೊನಾ ಕಾರಣದಿಂದ ಯುಎಇಗೆ ಸ್ಥಳಾಂತರಿಸಲಾಗಿದ್ದು ಅಕ್ಟೋಬರ್ 17ರಂದು ಟೂರ್ನಿ ಆರಂಭವಾಗಲಿದೆ ಹಾಗೂ ನವೆಂಬರ್ 14ರಂದು ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಅಂತ್ಯಗೊಳ್ಳಲಿದೆ.
ವಿಶ್ವಕಪ್ ಟೂರ್ನಿ ಆರಂಭಕ್ಕೆ ಇನ್ನೂ 40ಕ್ಕಿಂತ ಹೆಚ್ಚು ದಿನಗಳು ಬಾಕಿ ಇರುವಾಗಲೇ ಟೂರ್ನಿಯ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಈಗಾಗಲೇ ಕೆಲ ದೇಶಗಳು ಟಿ ಟ್ವೆಂಟಿ ಟೂರ್ನಿಗೆ ತಮ್ಮ ತಂಡಗಳನ್ನು ಪ್ರಕಟಿಸಿವೆ. ಆದರೆ ಇಂಡಿಯಾ ಟಿಂ ಮಾತ್ರ ತಂಡವನ್ನು ಘೋಷಣೆಯನ್ನು ಮಾಡಿಲ್ಲ. ಆದರೆ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದುಕೊಳ್ಳದೆ ಮೂವರು ಆಟಗಾರರು, ಕುಲದೀಪ್ ಯಾದವ್, ಮನೀಷ್ ಪಾಂಡೆ, ಶ್ರೇಯಸ್ ಐಯ್ಯರ್, ಟೂರ್ನಿಯಿಂದ ಹೊರ ಬೀಳುವ ಸಾಧ್ಯತೆಗಳಿವೆ.