Thursday, February 6, 2025

Latest Posts

ಹಿಂದಿ ದಿವಸ್ ವಿರುದ್ಧ ಪ್ರತಿಭಟನೆ..!

- Advertisement -

www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ  ಕನ್ನಡಪರ ಸಂಘಟನೆಗಳು  ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಹಿಂದಿ ಭಾಷೆಯನ್ನು ಖಡ್ಡಾಯಗೊಳಿಸದಂತೆ ರಾಜ್ಯ ಸರ್ಕಾರವು ಕ್ರಮವಹಿಸಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ  ಈ ಬಗ್ಗೆ ಜನಾಂದೋಲನ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ಸೇನಾ ಪಡೆಯ ರಾಜ್ಯಾಧ್ಯಕ್ಷ  ಶ್ರೀನಿವಾಸಗೌಡ  ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಹಿರಿಯ ಕನ್ನಡ ಚಳುವಳಿಗಾರ ಮುರುಳಿ, ರಾಜಗೋಪಾಲ್, ಪುರುಷೋತ್ತಮ್, ತಾಂಡವಮೂರ್ತಿ,  ನಿಜದನಿ ಗೋವಿಂದರಾಜು,  ಸೇರಿದಂತೆ ಕನ್ನಡ ಪರ ಸಂಘಟನೆಯ ಚಳುವಳಿಗಾರರು ಇದ್ದರು.

ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ

- Advertisement -

Latest Posts

Don't Miss