Friday, December 13, 2024

Latest Posts

ರೈತರಿಗೆ ಗುಡ್ ನ್ಯೂಸ್…!

- Advertisement -

www.karnatakatv.net :ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಮತ್ತು ಅತೀ ಸಣ್ಣ ರೈತರ ಆಧಾಯ ವೃದ್ಧಿಸೋ ಸಲುವಾಗಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಣೆ ಮಾಡಿತ್ತು, ಈಗಾಗಲೇ  2 ಹೆಕ್ಟೇರ್ ಗಿಂತ ಕಡಿಮೆ ಕೃಷಿ ಭೂಮಿ ಹೊಂದಿರೋ ಸುಮಾರು 12.14ಕೋಟಿ ರೈತ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೀತಿವೆ.

ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ಸದ್ಯ ನೀಡಲಾಗುತ್ತಿರೋ ವಾರ್ಷಿಕ 6 ಸಾವಿರ ರೂಪಾಯಿ ನೆರವನ್ನು ಕೇಂದ್ರ ಸರ್ಕಾರ 12 ಸಾವಿರ ರೂಪಾಯಿಗೆ ಹೆಚ್ಚಿಸುವ ಸಾಧ್ಯತೆ ಇದೆ. ಈ ಕುರಿತು ಚರ್ಚೆ ನಡೆಯುತ್ತಿದದ್ದು, ಸದ್ಯದಲ್ಲೇ ಇದಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಪ್ರಸ್ತುತವಾಗಿ 3 ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಸರ್ಕಾರ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡ್ತಾಯಿದೆ. ಸದ್ಯ ಈ ಪ್ರಸ್ತಾವನೆ ಕುರಿತಾಗಿ ಚರ್ಚೆಯಾಗ್ತಿದ್ದು ಒಂದು ವೇಳೆ ಇದಕ್ಕೆ ಅನುಮೋದನೆ ಸಿಕ್ಕರೆ ರೈತರಿಗೆ ಪ್ರತಿ ತಿಂಗಳು ಸಾವಿರ ರೂಪಾಯಿ ನೆರವು ಸಿಕ್ಕಂತಾಗುತ್ತೆ.

ಇನ್ನು  ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಪ್ರಯೋಜನ ಪಡೆಯಲು ಹೊಸದಾಗಿ ನೋಂದಾಯಿಸಿಕೊಳ್ಳೋ  ರೈತರು ಸೆ.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತಿರದ ಯಾವುದೇ ಬಾಪೂಜಿ ಕೇಂದ್ರ, ರೈತ ಸಂಪರ್ಕ ಕೇಂದ್ರ, ಅಟಲ್‌ಜೀ ಜನಸ್ನೇಹಿ ಕೇಂದ್ರ ಅಥವಾ ಇತರೆ ಸರ್ಕಾರಿ ಸೇವಾ ಕೇಂದ್ರಗಳಲ್ಲಿ ರೈತರು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಟಿವಿ- ನವದೆಹಲಿ

- Advertisement -

Latest Posts

Don't Miss