Saturday, July 5, 2025

Latest Posts

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮಹಾ ಮೇಳ..!

- Advertisement -

www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು.

ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ ನೀಡಿದ ಬಳಿಕ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ 500 ತಂಡಗಳು ಲಸಿಕೆ ಮೇಳದಲ್ಲಿ ಭಾಗಿಯಾಗಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯ ತನಕ  50 ಸಾವಿರ ಲಸಿಕೆ ಹಾಕುವ ಯೋಜನೆಯನ್ನು ರೂಪಿಸಲಾಗಿದೆ ಎಂದರು.

ಪಟ್ಟಣ ಪ್ರದೇಶಗಳಲ್ಲಿ ಈಗಾಗಲೇ ಶೇ 96 ರಷ್ಟು ಮಂದಿ ಲಸಿಕೆ ಹಾಕಿಸಿ ಕೊಂಡಿದ್ದಾರೆ ಗ್ರಾಮಾಂತರ ಪ್ರದೇಶದ ಜನರು ಲಸಿಕೆ ಹಾಕಿಸಿಕೊಳ್ಳಯತ್ತಿದ್ದಾರೆ. ಆದರೂ 1 ಲಕ್ಷ 99 ಸಾವಿರ ಮಂದಿಗೆ ಲಸಿಕೆ ಹಾಕಬೇಕಾಗಿದೆ. ಇಂದು ಕೋವಿಡ್ ಲಸಿಕೆ ಮಹಾ ಮೇಳದಲ್ಲಿ ಗರಿಷ್ಟ 50 ಸಾವಿರ ಮಂದಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರ್ಷಲ್ ಬೋಯರ್ ನಾರಾಯಣ್ ರಾವ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೆಗೌಡ, ತಹಸೀಲ್ದಾರ್ ಚಿದಾನಂದ ಗುರುಸ್ವಾಮಿ ಹಾಜರಿದ್ದರು.

ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ

- Advertisement -

Latest Posts

Don't Miss