ಪಂಜಾಬ್ ಮುಖ್ಯಮಂತ್ರಿ ಯಾರಾಗಲಿದ್ದಾರೆ..!

www.karnatakatv.net: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ನಂತರ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಹಲವರ ಹೆಸರು ಕೇಳಿ ಬಂದಿದ್ದು, ಹಿರಿಯ ನಾಯಕಿ ಅಂಬಿಕಾ ಸೋನಿ ಮುಂದೆಯಿದ್ದರು, ಆದರೆ ಸೋನಿ ಅವರು ತಮಗೆ ಸಿಎಂ ಸ್ಥಾನ ಬೇಡ, ಸಿಖ್ ಸಮುದಾಯದವರೇ ಸಿಎಂ ಆಗಲಿ ಎಂದು ಹೇಳಿದ ನಂತರ ಇನ್ನಷ್ಟು ಕೂತೂಹಲ ಹೆಚ್ಚಾಗಿದೆ.

ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. ಹೊಸ ಸಿಎಲ್ ಪಿ ನಾಯಕನ ಹೆಸರು ಇನ್ನೂ ಅಂತಿಮಗೊಳಿಸದ ಹಿನ್ನೆಲೆ ಈ ನಿರ್ಧಾರ ತೆಗೆದುಕೊಂಡಿರುವ  ಬಗ್ಗೆ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

ಸೆ.18 ರ ಶನಿವಾರ ಅಮರೀಂದರ್  ಸಿಂಗ್ ರಾಜೀನಾಮೆ ನೀಡಿದ ನಂತರ ಪಂಜಾಬ್ ಹೊಸ ಮುಖ್ಯಮಂತ್ರಿ ಆಯ್ಕೆ ಮಾಡುವ ಹೊಣೆಯನ್ನು ಪಕ್ಷದ ನಾಯಕಿ ಸೋನಿಯಾ ಗಾಂಧಿ ವಹಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ಹೊಸ ನಾಯಕ ಒಮ್ಮತ ಮೂಡದ ಕಾರಣ.

About The Author