2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ರ‍್ಯಾಲಿ..!

www.karnatakatv.net: ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ನೀಡುವಂತೆ ಆಗ್ರಹಿಸಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನದ ರ‍್ಯಾಲಿ ಬೆಳಗಾವಿಯಲ್ಲಿ ನಡೆಸಲಾಗಿದೆ.

ಜಯಮೃತ್ಯಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮಾಜದ ರಾಷ್ಟಾಧ್ಯಕ್ಷ ವಿಜಯಾನಂದ ಕಾಶಪ್ಪನವರ ಅವರ ನೇತೃತ್ವದಲ್ಲಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಗಾಂಧಿಭವನದ ವರೆಗೆ ನಡೆಯಲಿರುವ ರ‍್ಯಾಲಿ ಹಮ್ಮಿಕೊಳ್ಳಾಯಿತು ಈ ವೇಳೆ ತೆರೆದ ಜೀಪಿನಲ್ಲಿ ಜಯಮೃತ್ಯುಂಜಯ ಸ್ವಾಮೀಜಿಗಳು ಮೆರವಣಿಗೆಯಲ್ಲಿ ಭಾಗಿ ಆದರು. ಮೆರವಣಿಗೆ ಬಳಿಕ ಗಾಂಧಿಭವನದಲ್ಲಿ ಸಮಾವೇಶ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಪ್ರಮುಖ ರಾಜಕೀಯ ಮುಖಂಡರು ಹಾಗೂ ಪಂಚಮಸಾಲಿ ಸಮಾಜದ ಸಾವಿರಾರು ಜನ ಭಾಗಿ ಆಗಿದ್ದರು. ಇಂದಿನಿAದ ೨ಎ ಮಿಸಲಾತಿ ನೀಡುವಂತೆ ಪಂಚಮಸಾಲಿ ಸಮುದಾಯದ ಪ್ರತಿಜ್ಞಾ ಪಂಚಾಯತ್ ಬೃಹತ್ ಅಭಿಯಾನ ೩೦ನೇ ದಿನಕ್ಕೆ ಕಾಲಿಟ್ಟಿದೆ.

ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ

About The Author