ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್ ಗಳ ಚಾಲನೆ..!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೊದಲ  ಎಲೆಕ್ಟ್ರಿಕ್ ಬಸ್ ಗಳಿಗೆ  ಚಾಲನೆ ಸಿಕ್ಕಿದೆ.

ಹೌದು , ಬೆಂಗಳೂರಿನಲ್ಲಿ ವಾಹನಗಳ ಶಬ್ದಕ್ಕೆ ಬೆಸತ್ತ ಜನರಿಗೆ ಈಗ ಸಂತೋಷದ ವಿಷಯವೊಂದು ಕಾದಿದೆ. ನಗರದಲ್ಲಿ ವಾಹನಗಳ ಕಿರಿಕಿರಿ ಇನ್ನು ಮುಂದೆ ಇಲ್ಲದಂತಾಗುತ್ತದೆ. ಎಲೆಕ್ಟ್ರಿಕ್ ಬಸ್ ಗಳನ್ನು ಲೋಕಾರ್ಪಣೆ ಮಾಡುತ್ತಿದ್ದು, ಕೆಂಗೇರಿ ಮೆಟ್ರೊ ನಿಲ್ದಾಣದಿಂದ ನಿಯೋಜಿಸಲಾಗಿದೆ. ಎನ್‌ಟಿಪಿಸಿ ಮತ್ತು ಜೆಬಿಎಂ ಆಟೋ ಕಂಪನಿಗಳು ಜಂಟಿಯಾಗಿ 9 ಮೀಟರ್ ಉದ್ದದ 90 ನಾನ್ ಎಸಿ ಎಲೆಕ್ಟ್ರಿಕ್ ಬಸ್  ಗಳನ್ನು ಒದಗಿಸುವ ಕೆಲಸವನ್ನು ವಹಿಸಿಕೊಂಡಿವೆ.

ಬಿಎಂಟಿಸಿ ಹಲವು ದಿನಗಳ ಕನಸು ಇಂದು  ನನಸಾಗಿದ್ದು, ಬಿಎಂಟಿಸಿ  ಎಲೆಕ್ಟ್ರಿಕ್ ಬಸ್ ಗಳು ರಸ್ತೆಗಿಳಿಯುತ್ತಿವೆ. ಇಂದು ಬೆಳಿಗ್ಗೆ 10:30 ಕ್ಕೆ ಅಧಿಕೃತವಾಗಿ ಬಸ್ ಗಳಿಗೆ ಚಾಲನೆ ಸಿಕ್ಕಿದ್ದು, ಸಾರಿಗೆ ಸಚಿವ ಶ್ರೀರಾಮುಲು ಕೆಂಗೇರಿ ಬಸ್ ನಿಲ್ದಾಣದಲ್ಲಿ ಎಲೆಕ್ಟ್ರಿಕ್ ಬಸ್‌ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಉದ್ಘಾಟನೆ ಬಳಿಕ ಸಚಿವರು ಎಲೆಕ್ಟ್ರಿಕ್ ಬಸ್‌ನಲ್ಲಿ  ನಗರ ಪ್ರದಕ್ಷಿಣೆ ಮಾಡಿ,  ಸ್ಮಾರ್ಟ್ ಸಿಟಿ ಯೋಜನೆಯಡಿ ಮೊದಲ ಬಸ್‌ಗೆ ಇಂದು ಚಾಲನೆ ಸಿಕ್ಕಿದೆ. ಮೊದಲ ಹಂತದಲ್ಲಿ 300 ಎಲೆಕ್ಟ್ರಿಕ್ ಬಸ್‌ಗಳಿಗೆ ಬಿಎಂಟಿಸಿ ಗುತ್ತಿಗೆ ನೀಡಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ 90 ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲು 2020ರ ಫೆಬ್ರುವರಿಯಲ್ಲಿ ಟೆಂಡರ್ ಆಹ್ವಾನಿಸಲಾಗಿತ್ತು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಎಲೆಕ್ಟ್ರಿಕ್ ಬಸ್‌ನಲ್ಲಿ ಸುಮಾರು 30 – 35 ಪ್ರಯಾಣಿಕರು ಕುಳಿತುಕೊಳ್ಳುವ ವ್ಯವಸ್ಥೆ ಇದ್ದು,  ಈ ಬಸ್‌ಗಳನ್ನು ಮುಖ್ಯವಾಗಿ ಮೆಟ್ರೋ ನಿಲ್ದಾಣಗಳಲ್ಲಿ ಬರುವಂತಹ ಪ್ರಯಾಣಿಕರಿಗೆ ಬೇರೆ ಏರಿಯಾಗಳಿಗೆ ಪ್ರಯಾಣಿಸಲು ಅನುಕೂಲವಾಗಲು ಬಳಸಿಕೊಳ್ಳಲಾಗುತ್ತದೆ.  ಈ ಎಲೆಕ್ಟ್ರಿಕ್ ಬಸ್‌ ಅನ್ನು 45 ನಿಮಿಷ ಚಾರ್ಜ್ ಮಾಡಿದರೆ 120 ಕಿ.ಮೀ ಸಂಚಾರ ಮಾಡಲಿದೆ ಎಂದು ತಿಳಿಸಿದ್ದಾರೆ.

About The Author