Sunday, September 8, 2024

Latest Posts

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!

- Advertisement -

www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ.

ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ )  ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ನೇಮಕ ಮಾಡುವಾಗ ಹಿಂದಿ, ಇಂಗ್ಲಿಷ್ ಮಾತ್ರವಲ್ಲದೆ  ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು.

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ಸ್ಥಗಿತಗೊಳಿಸಿದ್ದ ಕ್ಲರ್ಕ್ ಹುದ್ದೆಗಳ ನೇಮಕಾತಿಯನ್ನು ಮುಂದುವರೆಸಲು ಹಣಕಾಸು ಸಚಿವಾಲಯವು ಒಪ್ಪಿಗೆ ನೀಡಿದ್ದು, ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಯಲ್ಲೇ ನಡೆಸಲು ಮಾತ್ರ ಸೂಚಿಸಿದೆ. ಜುಲೈನಲ್ಲಿ 12 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸುಮಾರು 5,800 ಹುದ್ದೆಗಳ ನೇಮಕಕ್ಕೆ ಹೊರಡಿಸಿದ್ದ ಅಧೀನೇಮಕ ಪ್ರತ್ರಿಯೆ ಮುಂದುವರೆಯಲಿದೆ. ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿದ್ದ ಬ್ಯಾಂಕುಗಳು ಈಗ ಹೊಸದಾಗಿ ಅಧಿಸೂಚನೆ ಪ್ರಕಟಿಸುವ ಸಾಧ್ಯತೆಗಳಿವೆ.

- Advertisement -

Latest Posts

Don't Miss