Tuesday, October 14, 2025

Latest Posts

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ..!

- Advertisement -

www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು ಬಂದಿದ್ದು, ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಿದಾಗ ಬಿಗಿಯಾದ ಕ್ರಮಗಳಿಂದಾಗಿ ಉಗ್ರರ ಸಂಖ್ಯೆ ಕ್ಷೀಣಿಸಿತ್ತು.

2019ರಲ್ಲಿ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಇದೇ ಮೊದಲ ಬಾರಿಗೆ ಭಯೋತ್ಪಾಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪಾಕಿಸ್ತಾನದಲ್ಲಿರುವ ಜೈಶ್-ಎ-ಮೊಹಮ್ಮದ್  ಮತ್ತು ಲಷ್ಕರ್-ಇ-ತೊಯ್ಬಾ ಗುಂಪುಗಳ ಭಯೋತ್ಪಾದಕರು ಜಮ್ಮು ಕಾಶ್ಮೀರಕ್ಕೆ ನುಸುಳಿದ್ದಾರೆ ಎಂದು ಯೂರೋಪಿಯನ್ ಯೂನಿಯನ್​ ಟುಡೇ ಸಂಸ್ಥೆಯು ನಿಕ್ಕಿ ಏಷ್ಯಾದ ವರದಿಯನ್ನು ಉಲ್ಲೇಖಿಸಿ ವರದಿ ಮಾಡಿದೆ.

- Advertisement -

Latest Posts

Don't Miss