- Advertisement -
www.karnatakatv.net : ರಾಯಚೂರು: ಜಿಲ್ಲೆಯ ಯರಮರಸ್ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಖಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು ಪ್ರಮುಖ ಆರೋಪಿ ಸಾಯಿ ಅಲಿಯಾಸ್ ಸೌರಭ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಮಂಗಳವಾರ ರಾತ್ರಿ ಸೌರಭ್ ಸೇರಿ ಇನ್ನಿಬ್ಬರು ಆರೋಪಿಗಳು ಸೇರಿ ಕೊಲೆ ನಡೆಸಿದ್ದರು. ಪ್ರಕರಣದ ಬೆನ್ನತ್ತಿದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು
- Advertisement -