ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅಕ್ಬೋಬರ್ 7 ರಂದು ಚಾಲನೆ ದೊಯಲಿದ್ದು ಈ ಮಧ್ಯೆ ರಾಜ್ಯ ಸರ್ಕಾರ ದಸರಾ ಮಹೋತ್ಸವಕ್ಕೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅರಮನೆ ಆವರಣದಲ್ಲಿ ದಸರಾ ಆಚರಣೆ ಮಾಡಬೇಕು ಅಂತ ಆದೇಶಿಸಿರೋ ರಾಜ್ಯ ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಹೊಸ ಮಾರ್ಗಸೂಚಿಗಳನ್ನು ಖಡ್ಡಾಯಗೊಳಿಸಿದೆ.
ಇನ್ನೂ ಸರ್ಕಾರದ ನೂತನ ಮಾರ್ಗಸೂಚಿಗಳ ಪ್ರಮುಖ ಅಂಶಗಳನ್ನು ನೋಡೋದಾದ್ರೆ, ದಸರಾದಲ್ಲಿ ಭಾಗಿಯಾಗೋ ಜನರು ಖಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಬೇಕು, ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 100 ಜನರಿಗೆ ಮಾತ್ರ ಅನುಮತಿ, ಜಂಬೂಸವಾರಿ ವೀಕ್ಷಣೆಗೆ ಎಲ್ಇಡಿ ಸ್ಕ್ರೀನ್ ಗಳ ಬಳಕೆ, ಸಾಂಸ್ಕೃತಿಕ ಕಾರ್ಯಕ್ರಮಗಳಾದ ಜಂಬೂಸವಾರಿ, ಪಂಜಿನ ಕವಾಯತಿಗೆ 500 ಜನರಿಗೆ ಮಾತ್ರ ಅವಕಾಶ ನೀಡಬೇಕು ಅಂತ ಮೈಸೂರು ಜಿಲ್ಲಾಡಳಿತಕ್ಕೆ ಸರ್ಕಾರ ಆದೇಶಿಸಿದೆ. ಇನ್ನು 8 ದಿನಗಳ ಕಾಲ ನಡೆಯೋ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಖಡ್ಡಾಯವಾಗಿ ಈ ಮಾರ್ಗಸೂಚಿಗಳನ್ನು ಅನುಸರಿಸೋ ಕುರಿತು ಕ್ರಮಕೈಗೊಳ್ಳಬೇಕು ಅಂತ ಸರ್ಕಾರ ಆದೇಶಿಸಿದೆ.
ಇನ್ನು ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸರಳವಾಗಿ ದಸರಾ ಆಚರಣೆಗೆ ಅನುಮತಿ ನೀಡಲಾಗಿದೆ. ಆದ್ರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 400ಕ್ಕೂ ಅಧಿಕ ಮಂದಿ ಭಾಗಿಯಾಗುವಂತಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುತ್ತೆ ಅಂತ ಮಾರ್ಗಸೂಚಿಯಲ್ಲಿ ತಿಳಿಸಿದೆ. ಪ್ರಮುಖವಾಗಿ ಅಕ್ಟೋಬರ್ 6ರ ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದಿನಿಂದ 2 ದಿನಗಳ ಕಾಲ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿ ಮೈಸೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.