- Advertisement -
ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಬಡಾಲ ಅಂಕಲಗಿಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿ, ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ತೆವ್ವ ಖನಗಾವಿ (45), ಪೂಜಾ ಖನಗಾವಿ(8), ಸವಿತಾ ಖಾನಗಾವಿ (28), ಕಾಶವ್ವಾ ಕೊಳೆಪ್ಪನವರ್( 8), ಲಕ್ಷ್ಮಿ ಖನಗಾವಿ (15), ಅರ್ಜುನ್ ಖನಗಾವಿ (45 ) ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿದ ತಕ್ಷಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಒಡೆತನದ ಅಂಬುಲೆನ್ಸ್ ಜೊತೆಗೆ ಸ್ಥಳಕ್ಕೆ ತೆರಳಿದ್ದಾರೆ. ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದ್ರು.
ಕರ್ನಾಟಕ ಟಿವಿ, ಬೆಳಗಾವಿ
- Advertisement -