Saturday, April 19, 2025

Latest Posts

ಲಖಿಂಪುರ್ ಖೇರಿ ಹತ್ಯಾಕಾಂಡ ತನಿಖೆಗೆ ಆಯೋಗ ರಚನೆ

- Advertisement -

ಉತ್ತರಪ್ರದೇಶ: ಲಖಿಂಪುರ್ ಖೇರಿಯಲ್ಲಿ ನಡೆದ 9 ಮಂದಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನೂ  ರಚಿಸಿದೆ.

ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ವರಿಂದ ಪ್ರಕರಣದ ಸ್ವತಂತ್ರ ತನಿಖೆಗೆ ತಿರ್ಮಾನಿಸಿದೆ.

ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಮಾಹಿತಿ ಹೊರಡಿಸಿದ್ದಾರೆ. ಸೆಕ್ಷನ್ 3, 1952 ವಿಚಾರಣಾ ಆಯೋಗದ ಅಧಿನಿಯಮದ ಅಡಿಯಲ್ಲಿ ಪ್ರಕರಣ ತನಿಖೆ ನಡೆಸಲು ಸೂಚಿಸಿದ್ದು, ಇನ್ನೆರಡು ತಿಂಗಳೊಳಗೆ ಘಟನೆಯ ಸಂಪೂರ್ಣ ಮಾಹಿತಿ ನೀಡುವಂತೆ ಕೋರಲಾಗಿದೆ. 

ಕಳೆದ ಭಾನುವಾರ ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದು 8 ಮಂದಿ ರೈತರು ಮತ್ತು ಓರ್ವ ಬಿಜೆಪಿ ಕಾರ್ಯಕರ್ತ ಮೃತಪಟ್ಟಿದ್ದರು.

- Advertisement -

Latest Posts

Don't Miss