Wednesday, April 16, 2025

Latest Posts

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

- Advertisement -

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ. 

ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಆಪ್ತರು ಅಂತ ಹೇಳಲಾಗಿದೆ. ಸದ್ಯ ಪೊಲೀಸರು ಬಂಧಿತರ ವಿಚಾರಣೆ ನಡೆಸುತ್ತಿದ್ದು, ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ  ಆಶೀಶ್​ ಮಿಶ್ರಾ ಇನ್ನೂ ನಾಪತ್ತೆಯಾಗಿದ್ದಾರೆ.ಪ್ರಕರಣದ ಪ್ರಮುಖ ಆರೋಪಿಯಾಗಿರೋ ಆಶೀಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

- Advertisement -

Latest Posts

Don't Miss