Monday, October 6, 2025

Latest Posts

ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ..!

- Advertisement -

www.karnatakatv.net : ರಾಕಿಂಗ್ ಸ್ಟಾರ್ ಯಶ್ ಮತ್ತೆ ಮುಂಬೈನಲ್ಲಿ ಕಾಣಿಸಿಕೊಂಡು ಜನರಿಗೆ ಅಚ್ಚರಿಯನ್ನು ಮೂಡಿಸಿದ್ದಾರೆ.

ಹೌದು.. ಪ್ಯಾನ್ ಇಂಡಿಯಾ ಹೀರೋ ಯಶ್ ಇತ್ತೀಚೆಗಷ್ಟೆ ಮುಂಬೈನಲ್ಲಿ ಕಾಣಿಸಿಕೊಂಡಿದ್ರು ಆದ್ರೇ ಈಗ ಮತ್ತೆ ಮುಂಬೈಗೆ ತೆರಳಿದ್ದು ಎಲ್ಲರಲ್ಲೂ ಶಾಕ್ ನೀಡಿದ್ದಾರೆ. ಮುಂಬೈನ ಬೀದಿಯಲ್ಲಿ ಹೋಗುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕೆಜಿಎಫ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದ ಯಶ್ ಬಾಲಿವುಡ್ ನಲ್ಲೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಯಶ್ ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲ್ಲು ಅಭಿಮಾನಿಗಳು ಮುಗಿಬಿದ್ದರು. ಹಾಗೇ ಯಶ್ ಸಲೂನ್ ಒಂದರಲ್ಲಿ ಹೊಸ ಹೇರ್ ಸ್ಟೈಲ್ ಮಾಡಿಸುತ್ತಿರುವ ವಿಡಿಯೋ ಈಗ ತುಂಬಾ ವೈರಲ್ ಆಗಿದೆ. ತಮ್ಮ ಕೂದಲಿಗೆ ಕಲರಿಂಗ್ ಮಾಡಿಸಿದ್ದು, ಅಭಿಮಾಸಿಗಳು ಯಶ್ ರನ್ನು ನೋಡಿ ಥ್ರಿಲ್ ಆಗಿದ್ದಾರೆ.
ಮುಂಬೈನಲ್ಲಿ ಯಶ್ ಅವರನ್ನು ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ. ಅಂದಹಾಗೆ ಯಶ್ ಮುಂಬೈನಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಿಗೆ ಕುತೂಹಲ ಕೆರಳಿಸಿದೆ.

ಅಂದಹಾಗೆ ಬಹುನಿರೀಕ್ಷೆಯ ಸಿನಿಮಾ ಮುಂದಿನ ವರ್ಷ ಏಪ್ರಿಲ್ 14 ಕ್ಕೆ ತೆರೆಗೆ ಬರುತ್ತಿದ್ದು, ತೆರೆಮೇಲೆ ರಾಕಿಂಗ್ ಸ್ಟಾರ್‌ನನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇನ್ನು ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಸಹ ಎಲ್ಲರಲ್ಲಿದೆ. ಈ ನಡುವೆ ಯಶ್ ದಿಢೀರ್ ಅಂತ ಮುಂಬೈನಲ್ಲಿ ಕಾಣಿಸಿಕೊಂಡಿರುವುದು ಆಶ್ಚರ್ಯ ಮೂಡಿಸಿದೆ.

- Advertisement -

Latest Posts

Don't Miss