ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮತ್ತು ಜೆಡಿಎಸ್ ಕಾರ್ಯಕರ್ತರ ವಾಗ್ವಾದದ ವಿಡಿಯೋ ವೈರಲ್ ಆಗಿರೋ ವಿಚಾರ ಕುರಿತಂತೆ ಸುಮಲತಾ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಾಚಹಳ್ಳಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ,ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯವೇ ಹೊರತು, ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ, ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತೆ. ಆ ರೀತಿ ತಪ್ಪು ಯಾರೂ ಮಾಡಬಾರದು. ನಾನಂತೂ ಆ ತಪ್ಪು ಮಾಡೋದಿಲ್ಲ. ಅಂತಹ ವಿಚಾರಗಳನ್ನೆಲ್ಲಾ ನನ್ನ ಪ್ರಚಾರಕ್ಕೆ ಬಳಸೋದು ನನಗಿಷ್ಟ ಇಲ್ಲ. ಹಿಂದೆಯೂ ನಾನು ಸಾಕಷ್ಟು ಬಾರಿ ಹೇಳಿದ್ದೀನಿ, ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕು. ನಾವೇ ನಮ್ಮ ಸಾಧನೆಗಳ ಬಗ್ಗೆ ಮಾತಾಡಬಾರದು ಅಂತ ಸಂಸದೆ ಸುಮಲತಾ ಬೇಸರವ್ಯಕ್ತಪಡಿಸಿದ್ರು. ಯಾರೇ ಮಾಡಿರಲಿ ಅದನ್ನ ಹೇಳಿಕೊಳ್ಳಬಾರದು. ಯಾರು ಬೇಕಾದರೂ ಇದರ ಕ್ರೆಡಿಟ್ ತೆಗೆದುಕೊಳ್ಳಲಿ. ನನಗೆ ಆ ಬಗ್ಗೆ ಬೇಜಾರ್ ಏನೂ ಇಲ್ಲ.
ಬಳಿಕ ಮಾತನಾಡಿದ ಸುಮಲತಾ, ನನ್ನ ಕೆಲಸ ಈಗಷ್ಟೇ ಆರಂಭವಾಗಿದೆ. ಅದನ್ನ ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗುವ ನಂಬಿಕೆ ನನಗಿದೆ ಅಂತ ಸುಮಲತಾ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ ಅಧಿವೇಶನದ ಬಳಿಕ ಕ್ಷೇತ್ರ ಪ್ರವಾಸ ಮಾಡೋದಾಗಿ ಸುಮಲತಾ ಹೇಳಿದ್ದಾರೆ. ಅಲ್ಲದೆ ಬಜೆಟ್ ನಲ್ಲಿ ಮಂಡ್ಯ ಕ್ಷೇತ್ರಾಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಲಾಗುತ್ತೆ ಅನ್ನೋ ವಿಶ್ವಾಸವಿದ್ದು, ವಿಶೇಷ ಯೋಜನೆ ನೀಡುವಂತೆ ಸಚಿವರ ಜೊತೆ ಚರ್ಚಿಸುತ್ತೇನೆ. ಮಂಡ್ಯ ರೈತರ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡೋದಾಗಿ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನಾಳೆ ರಾಜ್ಯ ರಾಜಕಾರಣದಲ್ಲಿ ಏನಾಗಲಿದೆ ಗೊತ್ತಾ..? ಮಿಸ್ ಮಾಡದೇ ಈ ವಿಡಿಯೋ ನೋಡಿ