www.karnatakatv.net: ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಿಮಿತ್ಯ ತಾಲೂಕಾಡಳಿತ ವತಿಯಿಂದ ತಹಶೀಲ್ದಾರ್ ಬಸವರಾಜ ನಾಗರಾಳ ಜನರ ಸಮಸ್ಯೆ ಆಲಿಸಿದರು. ನಂತರ ಗ್ರಾಮದ ನಾನಾ ಓಣಿಗಳಲ್ಲಿ ಕಾಲ್ನಡಿಗೆ ಮೂಲಕ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದರು.
ಗ್ರಾಮದಲ್ಲಿ ರಸ್ತೆಗಳ ಸ್ಥಿತಿಗತಿ ಕುಡಿಯುವ ನೀರು ವಿದ್ಯುತ್ ದೀಪ ಸೇರಿದಂತೆ ಮೂಲಸೌಕರ್ಯಗಳನ್ನು ವಿಕ್ಷಿಸಿದರು ಆರೊಗ್ಯ ತಪಾಸಣಾ ಶಿಬಿರ ನಡೆಸಲಾಯಿತು ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು ಇದೇ ವೇಳೆ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಕೂಡಾ ನಡೆಸಲಾಯಿತು ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಿ ಸಂಧ್ಯಾ ಸುರಕ್ಷಾ ವಿಧವಾ ವೇತನ ವಿಶೇಷ ಚೈತನ್ಯ ಸೇರಿದಂತೆ ನಾನಾ ಯೋಜನೆಗಳ ಆದೇಶ ಪತ್ರವನ್ನು ಫಲಾನುಭವಿಗಳಿಗೆ ವಿತರಿಸಲಾಯಿತು ಅತಿಥಿಗಳಾಗಿ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಉಪಸ್ಥಿತರಿದ್ದರು.
ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ