www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 5 ಮಂದಿ ಸಾವನ್ನಪ್ಪಿದ್ದು, 161 ಮಂದಿಗೆ ಸೋಂಕು ದೃಢಪಟ್ಟಿದೆ ನಗರದಲ್ಲಿ ಸೋಂಕಿತರ ಸಂಖ್ಯೆ 12,49,662ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 399 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿoದ ಚೇತರಿಸಿಕೊಂಡವರ ಸಂಖ್ಯೆ 29,36,926ಕ್ಕೆ ಏರಿಕೆಯಾಗಿದೆ. ಇನ್ನು 9,100 ಸಕ್ರೀಯ ಪ್ರಕರಣಗಳಿವೆ ಎಂದು ತಿಳಿಸಲಾಗಿದೆ. ರಾಜ್ಯಾದ್ಯಂತ ಇಂದು 85,022 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 349 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.41ಕ್ಕೆ ಇಳಿದಿದೆ.