Saturday, July 5, 2025

Latest Posts

ರಾಜ್ಯದಲ್ಲಿ ಇಂದು 290 ಕೊರೋನಾ ಪ್ರಕರಣಗಳು ಪತ್ತೆ..!

- Advertisement -

www.karnatakatv.net: ಮಹಾಮಾರಿ ಕೊರೊನಾಗೆ ಇಂದು 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38,017ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 24 ಗಂಟೆಯಲ್ಲಿ 290 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,86,276ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 137 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,50,844ಕ್ಕೆ ಏರಿಕೆಯಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 408 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿoದ ಚೇತರಿಸಿಕೊಂಡವರ ಸಂಖ್ಯೆ 29,39,647ಕ್ಕೆ ಏರಿಕೆಯಾಗಿದೆ. ಇನ್ನು 8,583 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 89,964 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 290 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.32ಕ್ಕೆ ಇಳಿದಿದೆ.

- Advertisement -

Latest Posts

Don't Miss