Sunday, December 22, 2024

Latest Posts

ಕೋವಿಡ್ 3ನೇ ಅಲೆ ಹೆಚ್ಚಾದರೆ ಶಾಲೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ..!

- Advertisement -

www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.

ಹೌದು..”ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31 ವಿದ್ಯಾರ್ಥಿಗಳಲ್ಲಿ ಲಕ್ಷಣ ಕಂಡು ಬಂದಿವೆ. ಯಾರಿಗೂ ಯಾವುದೇ ತೊಂದರೆಯಿಲ್ಲ” ಎಂದು ಸ್ಪಷ್ಟಪಡಿಸಿದರು. “ರಾಜ್ಯದಲ್ಲಿ 48 ಸಾವಿರ ಶಾಲೆಗಳಿವೆ. ಒಂದು ಶಾಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶಾಲೆ ಆರಂಭಿಸಲಾಗಿದೆ ಎಂಬ ಕಾರಣಕ್ಕೆ ಸೋಂಕು ಬಂದಿಲ್ಲ. ಪೋಷಕರಿಂದಲೂ ಬಂದಿರಬಹುದು. ಮಕ್ಕಳನ್ನು ಸಿನಿಮಾಕ್ಕೆ ಕರೆದುಕೊಂಡು ಹೋಗುತ್ತಾರೆ. ಪಾನಿಪೂರಿ ತಿನ್ನಲು ಪೋಷಕರು ಕರೆದೊಯ್ಯುತ್ತಾರೆ. ಯಾವುದೋ ಒಂದು ಶಾಲೆಯಲ್ಲಿ ಸೋಂಕು ಬಂದಿದೆ ಎಂದಾಕ್ಷಣ ಎಲ್ಲೆಡೆಯಲ್ಲಿಯೂ ಇದೇ ಪರಿಸ್ಥಿತಿ ಎಂದು ಬಿಂಬಿಸುವುದು ಬೇಡ” ಎಂದು ಹೇಳಿದರು.

“ಈಗಾಗಲೇ ಕೊರೊನಾ ಸೋಂಕು ಪತ್ತೆಯಾಗಿರುವ ಶಾಲೆಗೆ ಮೂರು ದಿನ ರಜೆ ಘೋಷಿಸಲಾಗಿದೆ. ಮೂರು ದಿನಗಳ ಬಳಿಕ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ಆರಂಭಿಸಲಾಗುತ್ತದೆ. ಬಹುತೇಕ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಶೇಕಡಾ 1ಕ್ಕಿಂತ ಕಡಿಮೆ ಇದೆ. ಹಾಗಾಗಿ ಶಾಲೆಗಳಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಯಾರೂ ಭಯಪಡುವ ಸ್ಥಿತಿ ಇಲ್ಲ” ಎಂದು ಸಚಿವರು ತಿಳಿಸಿದರು.

- Advertisement -

Latest Posts

Don't Miss