Friday, July 11, 2025

Latest Posts

UPSC ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ..!

- Advertisement -

www.karnatakatv.net: 2021ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ. ಇನ್ನೂ ಮುಖ್ಯ ಪರೀಕ್ಷೆಗಳು 2022 ಜ.7 ರಿಂದ 16 ರ ತನಕ ನಡೆಯಲಿವೆ.

ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಿಡಿಎಫ್ ಮಾದರಿಯಲ್ಲಿ ಲಭ್ಯವಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು 2022ರಲ್ಲಿ ನಡೆಯುವ ಮುಖ್ಯ ಪರೀಕ್ಷೆ ಬರೆಯಲು ಅರ್ಹರು. ಕೇಂದ್ರ ಲೋಕಸೇವಾ ಆಯೋಗ 712 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇವುಗಳಲ್ಲಿ 22 ಹುದ್ದೆಗಳು ಅಂಗವಿಕಲರಿಗೆ ಮೀಸಲಾಗಿವೆ. ಒಟ್ಟು 712 ಹುದ್ದೆಗಳನ್ನು ಭರ್ತಿ ಮಾಡಲು ಯುಪಿಎಸ್‌ಸಿ ಪರೀಕ್ಷೆ ನಡೆಸುತ್ತಿದೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಗೆ ಅಭ್ಯರ್ಥಿಗಳನ್ನು 1:15 ಅನುಪಾತದಲ್ಲಿ ಆಯ್ಕೆ ಮಾಡಲಾಗುತ್ತದೆ. ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆಯಾಗುತ್ತದೆ.

- Advertisement -

Latest Posts

Don't Miss