ದೇಶದಲ್ಲಿ 10,423 ಕೊರೋನಾ ಪ್ರಕರಣಗಳು 443 ಮಂದಿ ಮೃತ..!

www.karnatakatv.net: ಮಹಾಮಾರಿ ಕೊರೊನಾ ಇಳಿಕೆಯಾಗುತ್ತಿರುವುದು ಕಂಡು ಬಂದಿದ್ದು, ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

ಇಂದು ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,53,776ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 15,021 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,83,581ಕ್ಕೆ ತಲುಪಿದೆ. ಹಾಗೇ ಭಾರತದಲ್ಲಿ ಒಂದೇ 10,09,045 ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,02,10,339 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,06,85,71,879 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

About The Author