ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ಫೋಸಿಸ್ ಸುಧಾ ಮೂರ್ತಿ ಅವರಿಂದ 350 ಹಾಸಿಗೆಗಳ ದೇಣಿಗೆ..!

ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಗೆ ಇನ್ಫೋಸಿಸ್ ಫೌಂಡೇಶನ್ ವತಿಯಿಂದ 350 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಗೆ ದೇಣಿಗೆಯನ್ನು ನೀಡಲಾಗಿದೆ.103 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಣವಾಗಿದೆ. ಇನ್ಫೋಸಿಸ್ ನ ಅಧ್ಯಕ್ಷೆ ಸುಧಾಮೂರ್ತಿಯವರು ಆಸ್ಪತ್ರೆಗೆ ದೇಣಿಗೆ ನೀಡಿದ್ದಾರೆ. ಈ ಆಸ್ಪತ್ರೆ ಸೇರಿದರೆ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಜಯದೇವ ಹೃದ್ರೂಗ ಆಸ್ಪತ್ರೆ ಪಾತ್ರವಾಗಿಲಿದೆ.ನಾಲ್ಕು ಅಂತಸ್ತಿನ ಹೊಸ ಕಟ್ಟಡದಲ್ಲಿ ಎರಡು ಕಾರ್ಡಿಯಾಕ್ ಕ್ಯಾಥ್ ಲ್ಯಾಬ್, ಎರಡು ಶಸ್ತ್ರಚಿಕಿತ್ಸೆಯ ಕೊಠಡಿಗಳು, ಒಂದು ಹೈಬ್ರಿಡ್ ಶಸ್ತ್ರಚಿಕಿತ್ಸೆ ಕೊಠಡಿ, 100 ಐಸಿಯು ಬೆಡ್ ಗಳು, 250 ಸಾಮಾನ್ಯ ಹಾಸಿಗೆ ವ್ಯವಸ್ಥೆ ಇದೆ. ಜಯದೇವ ಆಸ್ಪತ್ರೆಯಲ್ಲಿ 650 ಹಾಸಿಗೆ ಸಾಮರ್ಥ್ಯ ಇದ್ದರೂ ಸಹ ಪ್ರತಿದಿನ 1500ಕ್ಕೂ ಹೆಚ್ಚು ಹೊರರೋಗಿಗಳು ತಪಾಸಣೆಗೆ ಬರುತಿದ್ದಾರೆ. ಈಗ ಹೊಸ 350 ಹಾಸಿಗೆಯ ಹೃದ್ರೋಗ ಆಸ್ಪತ್ರೆಯಿಂದ ಒತ್ತಡ ನಿವಾರಣೆಯಾಗುತ್ತದೆ.ಕೇವಲ 36 ಗಂಟೆ ಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಿರುವ ಇಂಜಿನಿಯರಿಂಗ್ ಕೌಶಲ್ಯಕ್ಕೆ ಸಾಕ್ಷಿಯಾಗಿದೆ. ಇನ್ಫೋಸಿಸ್ ಸುಧಾಮೂರ್ತಿಯವರು ಸಮಾಜ ಸೇವೆಯಲ್ಲಿ ತೊಡಗಿಕೊಂಡು ಸಮಾಜಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ.

About The Author