- Advertisement -
ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷ ಸಿಬ್ಬಂದಿಗಳು ಪಾರಾಗಿದ್ದಾರೆ. ಅಡುಗೆ ಕೊ ಣೆಯಲ್ಲಿ ಬೆಂಕಿ ಕಾಣಿಸಿ ಕೊಂಡ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ .
ಹೋಟೆಲ್‌ನಲ್ಲಿ ಕೆಲವೇ ಕೆಲವು ಮಂದಿ ಇದ್ದರು ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಎಲ್ಲರೂ ಹೊರಗೆ ಓಡಿ ಬಂದಿದ್ದು, ಅಗ್ನಿ ಶಾಮಕ ದಳಕ್ಕೆ ಸುದ್ದಿ ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಆಗಮಿಸಿದ್ದು, ಸದ್ಯಕ್ಕೆ ಪರಿಸ್ಥಿತಿ ಹತೋಟಿಗೆ ಬಂದಿದೆ ಎನ್ನಲಾಗಿದೆ.
- Advertisement -