ಸತತ ಹದಿನೈದು ದಿನಗಳಿಂದ ಪೆಟ್ರೋಲ್,​ ಡೀಸೆಲ್ ಬೆಲೆಯಲ್ಲಿ ಸ್ಥಿರತೆ,

ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ತಲಾ7 ರೂ. ಕಡಿತಗೊಳಿಸಿತ್ತು.
ರಾಷ್ಟ್ರ ರಾಜಧಾನಿಯಲ್ಲಿ ಲೀಟರ್ ಪೆಟ್ರೋಲ್ ದರ ಪ್ರಸ್ತುತ 103.97 ರೂಪಾಯಿಗೆ ಮಾರಾಟವಾಗುತ್ತಿದೆ. ಲೀಟರ್ ಡೀಸೆಲ್ 86.67 ರೂಪಾಯಿ ಕೊಟ್ಟು ಗ್ರಾಹಕರು ಕೊಳ್ಳುತ್ತಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ನಿಗದಿಯಾಗಿದೆ.
ಬೆಲೆಗಳಲ್ಲಿ ಇಳಿಕೆಯ ಹೊರತಾಗಿಯೂ ಹಲವೆಡೆ ಲೀಟರ್ ಪೆಟ್ರೋಲ್ ದರ 100 ರ ಗಡಿ ಆಚೆಗೇ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ಬೆಲೆ 91.43 ರೂಪಾಯಿ ಇದೆ. ಇನ್ನು, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

About The Author