ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. HPCLನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. HPCL ನಲ್ಲಿ ನೌಕರಿ ಮಾಡ ಬಯಸುವ ಅರ್ಹ ಅಭ್ಯರ್ಥಿಗಳು ನವೆಂಬರ್ 23 ರಿಂದ ಡಿಸೆಂಬರ್ 06 ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಹಾಕಬಹುದಾಗಿದೆ.
ಅಭ್ಯರ್ಥಿಗಳು HPCLನ ಅಧಿಕೃತ ವೆಬ್ಸೈಟ್ hindustanpetroleum.com ಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 23-11-2021 ರಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06/12/2021.
ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಇನ್‌ಸ್ಟ್ರುಮೆಂಟೇಶನ್, ಕಂಪ್ಯೂಟರ್ ಸೈನ್ಸ್ (ಐಟಿ) ನಲ್ಲಿ ಇಂಜಿನಿಯರಿಂಗ್ ಪದವಿಯನ್ನು ಶೇ.60ರಷ್ಟು ಅಂಕಗಳೊಂದಿಗೆ ಪಡೆದಿರಬೇಕು.ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 25 ವರ್ಷದೊಳಗಿರಬೇಕು.ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, SC/ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.




