ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಗ್ರಾಮದಲ್ಲಿರುವಂತ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಲೆಗೆ ರಜೆ ಘೋಷಣೆ ಮಾಡಿ, ಇತರೆ ವಿದ್ಯಾರ್ಥಿಗಳ ಪರೀಕ್ಷೆಯನ್ನು ಆರೋಗ್ಯ ಇಲಾಖೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದಂತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಸಿ ಶಿವಮೂರ್ತಿಯವರು ಕೊಡಗಾಪುರದ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಂತ ಉಮೇಶ್ ಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಶಾಲೆಯ ವಿದ್ಯಾರ್ಥಿಗಳನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ ಇಬ್ಬರು ವಿದ್ಯಾರ್ಥಿಗಳಿಗೂ ಕೊರೋನಾ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.
ಇನ್ನೂ ಶಾಲೆಯಲ್ಲಿ 73 ವಿದ್ಯಾರ್ಥಿಗಳಿದ್ದು, ಮೂವರು ಶಿಕ್ಷಕರು, ಇಬ್ಬರು ಅಡುಗೆ ಸಿಬ್ಬಂದಿಗಳು ಸೇರಿದ್ದಾರೆ. ಇವರೆಲ್ಲರನ್ನು ಆರೋಗ್ಯ ಇಲಾಖೆಯ ತಂಡದಿಂದ ಕೊರೋನಾ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ದೃಢಪಟ್ಟ ಕಾರಣ ಶಾಲೆಗೆ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.




