Friday, July 11, 2025

Latest Posts

ಟ್ರ್ಯಾಕ್ಟರ್‌ನಿಂದ ಆಯತಪ್ಪಿ ವಿದ್ಯಾರ್ಥಿನಿ ಸಾವು..!

- Advertisement -

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಶೋಭಾ ಹಂಗನಕಟ್ಟಿ ಎಂಬ 10 ವರ್ಷದ ಬಾಲಕಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಾರದ ಹಿನ್ನೆಲೆ ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ. ಶಿಹರಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಆಗಿದೆ.ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಊರಿನ ಗ್ರಾಮಸ್ಥರು ಓಡಾಡಲು ಹಾಗೂ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಮತ್ತು ರೈತರು ತಮ್ಮ ಫಸಲನ್ನು ಸಾಗಿಸಲು ಆ ಊರಿಗೆ ಬಸ್ ವ್ಯವಸ್ಥೆ ಮಾಡುತ್ತಾರ ಎಂದು ಕಾದುನೋಡಬೇಕಾಗಿದೆ.

- Advertisement -

Latest Posts

Don't Miss