Wednesday, October 15, 2025

Latest Posts

ಹಿರಿಯ ನಟ ಶಿವರಾಂ ನಿಧನ

- Advertisement -

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್. ಶಿವರಾಂ, 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು. ಸೋದರ ರಾಮನಾಥನ್ ಜತೆ ಸೇರಿ ‘ರಾಶಿ ಬ್ರದರ್ಸ್‌’ ಸಿನಿಮಾ ಸಂಸ್ಥೆ ಸ್ಥಾಪಿಸಿ ಹಲವು ಚಿತ್ರ ನಿರ್ಮಿಸಿದ್ದರು. ಚಿತ್ರರಂಗದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜತೆಯೂ ಶಿವರಾಂ ಕೆಲಸ ಮಾಡಿದ್ದರು. ಹಲವು ದಿಗ್ಗಜ ನಟರೊಂದಿಗೆ ಶಿವರಾಂ ತೆರೆ ಹಂಚಿಕೊಂಡಿದ್ದರು.

- Advertisement -

Latest Posts

Don't Miss