- Advertisement -
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು ಪರಿಶೀಲನೆ ಮಾಡಿ ತನಿಖೆ ನಡೆಸುತ್ತಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -