Tuesday, December 24, 2024

Latest Posts

ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಟಿಕೆ ದಂಧೆ..!

- Advertisement -

ನೆಲಮಂಗಲ: ಕೆಲಸ ಕೊಡಿಸುವ ನೆಪದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸೋಮೇಗೌಡ(25), ಜಯಕುಮಾರ್(32), ಭವಾನಿ(25) ಬಂಧಿತ ಆರೋಪಿಗಳು. ಕೆಲಸ ಕೊಡಿಸುವುದಾಗಿ ಸುಳ್ಳು ಹೇಳಿ ಬೆಂಗಳೂರಿನ ಕೆ.ಆರ್.ಪುರಂ ನಿಂದ 24ವರ್ಷದ ಯುವತಿಯನ್ನ ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಸದ್ಯ ಬ್ಯಾಡರಹಳ್ಳಿ ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿದ್ದಾರೆ. ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದೆ.

ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಆದ ರವಿಕುಮಾರ್‌ ಆರ್‌.ಜಿ ರವರು ನೀಡಿದ ದೂರಿನ ಸಾರಾಂಶವೇನೆಂದರೆ 13-30ಗಂಟೆಯ ಸಮಯದಲ್ಲಿ ಪಿರ್ಯಾದಿಯು ಠಾಣೆಯಲ್ಲಿರುವಾಗ ಮಾಹಿತಿದಾರರೊಬ್ಬರು ಠಾಣೆಗೆ ಹಾಜರಾಗಿ, ಠಾಣಾ ಸರಹದ್ದಿನ ಅಂದ್ರಹಳ್ಳಿ ಮುಖ್ಯರಸ್ತೆ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಹತ್ತಿರ, ಹೇರೋಹಳ್ಳಿ, ನೆಲಮಹಡಿಯಲ್ಲಿ ಹುಡುಗಿಯರನ್ನು ಇಟ್ಟುಕೊಂಡು ಮೊಬೈಲ್ ಕರೆಗಳ ಮೂಲಕ ಗಿರಾಕಿಗಳನ್ನು ಬರಮಾಡಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ. ಆರೋಪಿಗಳ ವಿಚಾರಣೆಯಿಂದ ಸೋಮೇಗೌಡನು ಮನೆಯನ್ನು ಬಾಡಿಗೆಗೆ ಪಡೆದುಕೊಂಡು ಗಿರಾಕಿಗಳನ್ನು ಕರೆಸುತ್ತಿದ್ದು, ಜಯಕುಮಾರ್‌ ಮತ್ತು ಭವಾನಿರವರು ಬಡಕುಟುಂಬದ ಹೆಣ್ಣು ಮಕ್ಕಳಿಗೆ ಹೆಚ್ಚಿನ ಸಂಬಳ ಬರುವ ಕೆಲಸ ಕೊಡಿಸುವುದಾಗಿ ನಂಬಿಸಿ ಮಾನವಸಾಗಣೆ ಮಾಡಿಕೊಂಡು ಬಂದು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದಾರೆ. ಹೆಚ್ಚಿನ ಹಣ ಸಂಪಾದನೆ ಮಾಡಬಹುದೆಂದು ಆಮಿಷ ತೋರಿಸಿ, ಗಿರಾಕಿಗಳೊಂದಿಗೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿ, ಹೆಚ್ಚಿನ ಹಣ ಸಂಪಾದಿಸಿ ಜೀವನ ಮಾಡುತ್ತಿರುವುದು ತಿಳಿದುಬಂದಿರುತ್ತದೆ, ದಾಳಿಯ ಸಮಯದಲ್ಲಿ ಆರೋಪಿತರಿಂದ ನಗದು 5000 ರ, 3 ಮೊಬೈಲ್ ಫೋನ್ ನಾಲ್ಕು ಕಾಂಡೂಮ್ಮ ಬಾಕ್ಸ್ ಅಮಾನತ್ತುಪಡಿಸಿಕೊಂಡಿರುತ್ತದೆ, ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ ನೊಂದ ಹುಡುಗಿಯನ್ನು ವೇಶ್ಯಾವಾಟಿಕೆಯಿಂದ ರಕ್ಷಿಸಿದ್ದೇವೆ ಎಂದು ಎಫ್​ಐಆರ್​ನಲ್ಲಿ ತಿಳಿಸಲಾಗಿದೆ.

- Advertisement -

Latest Posts

Don't Miss