Friday, January 10, 2025

Latest Posts

Jammu and Kashmir : ಕಾಲ್ತುಳಿತದಿಂದ 12 ಭಕ್ತರು ಸಾವು..!

- Advertisement -

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ತ್ರಿಕೂಟ ಬೆಟ್ಟಗಳಲ್ಲಿ ಮಾತಾ ವೈಷ್ಣೋದೇವಿ ಮಂದಿರವಿದ್ದು ಅಲ್ಲಿ ಈ ಅವಘಡ ಸಂಭವಿಸಿದೆ. ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರವಾಗಿ 10 ಲಕ್ಷ ಕೊಡುವುದಾಗಿ ಘೋಷಿಸಿದ್ದು. ಜೊತೆಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನು ಗಾಯಾಳುಗಳಿಗೆ ಜಮ್ಮು ಕಾಶ್ಮೀರದ ಸರ್ಕಾರದಿಂದ ಎರಡು ಲಕ್ಷ ರೂಪಾಯಿ ಮತ್ತು (PMNRF)ಫಂಡಿನಿಂದ ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರ ಪ್ರಕಟಿಸಲಾಗಿದೆ. ಮಾತಾ ವೈಷ್ಣೋದೇವಿ ಭವನದ ಬಳಿ 2:45ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಈ ದುರ್ಘಟನೆಯ ಬಗ್ಗೆ ಪ್ರಧಾನಿ ಮೋದಿಯವರು ಸಂತಾಪವನ್ನು ಸೂಚಿಸಿದ್ದು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

- Advertisement -

Latest Posts

Don't Miss