ರಾಜ್ಯದಲ್ಲಿ ಓಮಿಕ್ರಾನ್, ಕೊರೋನಾ ಆರ್ಭಟದ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುರುವಾರದಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ( Karnataka Cabinet Meeting ) ಒಟ್ಟಾರೆ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಚರ್ಚೆ ಮಾಡಿ ದೀರ್ಘಾವಧಿ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೋವಿಡ್ ( Covid-19 ) ಮತ್ತು ಒಮಿಕ್ರಾನ್ ವೈರಸ್ ( Omicron Variant ) ವೇಗವಾಗಿ ದೇಶ ಹಾಗೂ ರಾಜ್ಯಗಳಲ್ಲಿ ಹರಡುತ್ತಿದೆ. ಈ ಬಗ್ಗೆ ತಜ್ಞರೊಂದಿಗೆ ನಾಳೆ ಸಂಜೆ ಸಭೆ ನಡೆಸಿ ಚರ್ಚಿಸಲಾಗುವುದು. ಹಿಂದೆ ಎರಡು ಅಲೆಗಳನ್ನು ನಿಭಾಯಿಸಿರುವ ಅನುಭವದ ಹಿನ್ನೆಲೆಯಲ್ಲಿ ಆದಷ್ಟೂ ಜನಜೀವನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕರೊನಾ ನಿಯಂತ್ರಣಕ್ಕೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಬಗ್ಗೆ ಸೂಚನೆ ನೀಡುವಂತೆ ತಜ್ಞರಿಗೆ ಸೂಚನೆ ನೀಡಲಾಗಿದೆ ಎಂದರು.

About The Author