- Advertisement -
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ(fire) ಅವಘಡ ಸಂಭವಿಸಿದ್ದು, ಹೋಟೆಲ್ ನ ಗ್ರೌಂಡ್ ಫ್ಲೋರ್ ನಲ್ಲಿ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟಕ್ಕೆ (Cylinder explosion) ಹಲವರು ಗಾಯಗೊಂಡಿದ್ದಾರೆ.
ಚಂದ್ರಾಲೇಔಟ್ ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆಯ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಕಟ್ಟಡದ ಗ್ರೌಂಡ್ ಫ್ಲೋರ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಹೋಟೆಲ್ ಮಾಲಿಕ ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚಂದ್ರಾಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -