ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ, ಇದರ ಪ್ರಯುಕ್ತ ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿ ನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9;30 ಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು. ಬೆಂಗಳೂರಿನಲ್ಲಿ 7 ಲಕ್ಷ ಮಕ್ಕಳನ್ನು ಬಿಬಿಎಂಪಿ ಗುರುತಿಸಿದೆ. ರಾಜ್ಯದಲ್ಲಿ ಪ್ರಸ್ತುತ 25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ. ನಾಳೆ 10 ರಿಂದ 12 ಲಕ್ಷ ಡೋಸ್ ಲಸಿಕೆ ಕೇಂದ್ರದಿoದ ಬರುವ ನಿರೀಕ್ಷೆಇದೆ. ಲಸಿಕಾ ಕೇಂದ್ರಗಳ ಬಳಿ 30 ನಿಮಿಷಗಳ ವಿಶ್ರಾಂತಿ ಪಡೆಯಲು ಸಹಕಾರಿಯಾಗುವಂತೆ ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಅಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗಿದೆ.




